HomeLatest NewsBIG NEWS : 'ಬಾಗೇಪಲ್ಲಿ' ಇನ್ಮುಂದೆ 'ಭಾಗ್ಯನಗರ'  : ನಾಳೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ...

BIG NEWS : ‘ಬಾಗೇಪಲ್ಲಿ’ ಇನ್ಮುಂದೆ ‘ಭಾಗ್ಯನಗರ’  : ನಾಳೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿರುವ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಾಲೂಕು ಬಾಗೇಪಲ್ಲಿ ಹೆಸರನ್ನು ಬದಲಾಯಿಸಲು ಒತ್ತಾಯ ಕೇಳಿಬಂದಿತ್ತು.

ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ, ಆದ್ದರಿಂದ ಈ ಹೆಸರನ್ನು ಬದಲಿಸಬೇಕೆಂದು ಅಭಿಯಾನವೇ ಶುರುವಾಗಿತ್ತು, ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಜನರು ಒತ್ತಾಯಿಸಿದ್ದರು. ಆದ್ದರಿಂದ ಸರ್ಕಾರ ಹೆಸರು ಬದಲಿಸಲು ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular