ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ನಂದಿಬೆಟ್ಟದಲ್ಲಿ ನಾಳೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ನಾಳೆ ಜೂನ್ 19ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ರದ್ದಾಗಿದೆ. ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

