HomeLatest NewsBIG NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

BIG NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರನ್ಯಾ ರಾವ್ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ನಟಿ ರನ್ಯಾ ರಾವ್ ತಾಯಿ ರೋಹಿಣಿ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿಆರ್ ಐ ಅಧಿಕಾರಿಗಳು ನನ್ನ ಮಗಳನ್ನು ಅಕ್ರಮ ಬಂಧನದಲ್ಲಿಟ್ಟಿದ್ದಾರೆ. ಈಗಾಗಲೇ ರನ್ಯಾ ರಾವ್ ಗೆ ಜಾಮೀನು ಮಂಜೂರಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಕಾಫೆಪೋಸಾ ಆಕ್ಟ್ ಹಾಕಲಾಗಿದೆ. ಇದನ್ನು ಪ್ರಶ್ನಿಸಿ ರನ್ಯಾ ರಾವ್ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ವೇಳೆ ಕಾಫೆಪೋಸಾ ಇತ್ಯರ್ಥ ಮಾಡೋದು ಸಲಹಾ ಮಂಡಳಿಯಲ್ಲಿ ತೀರ್ಮಾನವಾಗಬೇಕಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular