ಡೆಹ್ರಾಡೂನ್: ಕೇದಾರನಾಥ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಗಲ್ ಚಟ್ಟಿ ಘಾಟ್ ಬಳಿ ಬೆಳಿಗ್ಗೆ ಬೂಕುಸಿತ ಸಂಭವಿಸಿದ್ದು, ಬಂಡೆಗಳ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಪಲ್ಲಕ್ಕಿಯಲ್ಲಿ ಯಾತ್ರಿಕರನ್ನು ಕೊಂಡೊಯ್ಯುತ್ತಿದ್ದ ಇಬ್ಬರು ಸಾವನ್ನಪ್ಪಿದದರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ರುದ್ರಪ್ರಯಾಗ್ ಎಸ್ ಪಿ ಅಕ್ಷಯ್ ಪ್ರಹ್ಲಾದ್ ತಿಳಿಸಿದ್ದಾರೆ.
ಪೊಲೀಸರು ಹಾಗೂ ಎಸ್ ಡಿ ಆರ್ ಎಫ್ ತಂಡದಿಂದ ಕಮರಿಗೆ ಬಿದ್ದಿರುವ ಗಾಯಾಳುಗಳನ್ನು ಮೇಲಕೆತ್ತುವ ರಕ್ಷಣಾ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವ ಮಹಿಳೆ ಇದ್ದು, ಅವರನ್ನು ಗೌರಿಕುಂಡದ ಆಸ್ಪತ್ರೆಗೆ ದಾಖಲಿಸಲಾಗಿದೆ.