HomeLatest NewsBIG NEWS: ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ: ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ: ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎರಡು ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8 ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ರಾಜ್ಯದ್ದೇ ಆಗಿರುವ ಕೆ.ಎಂ .ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆಗೆ ಅವಕಾಶ ವಿಚಾರವಗಿ ವಿಪಕ್ಷಗಳ ಆಕ್ರೋಶಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ, ನಮ್ಮ ಸ್ವಾಭಿಮಾನ ಅಡವಿಡಲು ಸಿದ್ಧರಿಲ್ಲ. ನಂದಿನಿ ಕನ್ನಡಿಗರ ನಾಡಿ ಮಿಡಿತ. ಬಿಜೆಪಿಯ ಕೊನೆಗಾಲ ಸನ್ನಿಹಿತ ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular