HomeLatest NewsSHOCKING: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿಯ ಮೂಗನ್ನೇ ಕಚ್ಚಿದ ಪತಿ

SHOCKING: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿಯ ಮೂಗನ್ನೇ ಕಚ್ಚಿದ ಪತಿ

ಹರ್ದೋಯ್: ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಪ್ರಕರಣದಲ್ಲಿ ಪ್ರಿಯಕರನೊಂದಿಗೆ ಪತ್ನಿಯನ್ನು ಹಿಡಿದ ನಂತರ ಪತಿ ಆಕೆಯ ಮೂಗನ್ನು ಕಚ್ಚಿದ್ದಾನೆ.

ಹರ್ದೋಯ್ ಬಳಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಪತಿಯನ್ನು ಬಂಧಿಸಲಾಗಿದೆ.

ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯನ್ನು ಬಂಧಿಸಲಾಗಿದೆ. ಅದೇ ಗ್ರಾಮದ ನಿವಾಸಿಯಾಗಿರುವ ತನ್ನ ಪ್ರಿಯಕರನನ್ನು ಭೇಟಿ ಮಾಡಲು ಮಹಿಳೆ ಹೋದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯ ಪತಿಯನ್ನು ರಾಮ್ ಖಿಲಾವನ್ ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿಯನ್ನು ಪ್ರಿಯಕರನ ಮನೆವರೆಗೆ ಹಿಂಬಾಲಿಸಿ ಬಂದಿದ್ದ. ಮಹಿಳೆಯ ಪ್ರಿಯಕರನ ಮನೆಯಲ್ಲಿ ದಂಪತಿಗಳ ನಡುವೆ ಭಾರಿ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ, ಪತಿ ಪತ್ನಿಯ ಮೂಗನ್ನು ಕಚ್ಚಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಆಕೆಯ ಪ್ರಿಯಕರನ ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಬಂದರು. ಮಹಿಳೆಯ ಸ್ಥಿತಿಯನ್ನು ನೋಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಹರಿಯವಾನ್ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆಯನ್ನು ಹಾರ್ದೋಯ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಮಹಿಳೆಗೆ ಆಗಿದ್ದ ಗಂಭೀರ ಗಾಯಗಳನ್ನು ನೋಡಿ, ಆಸ್ಪತ್ರೆಯ ವೈದ್ಯರು ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಿದ್ದಾರೆ.

ಹೆಚ್ಚುವರಿ ಎಸ್ಪಿ ನರೇಂದ್ರ ಕುಮಾರ್, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular