HomeLatest Newsಲೋಕಾಯುಕ್ತ ಹೆಸರಲ್ಲಿ ಸುಲಿಗೆ ಪ್ರಕರಣ: ಹೆಡ್ ಕಾನ್ಸ್ ಟೇಬಲ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಲೋಕಾಯುಕ್ತ ಹೆಸರಲ್ಲಿ ಸುಲಿಗೆ ಪ್ರಕರಣ: ಹೆಡ್ ಕಾನ್ಸ್ ಟೇಬಲ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಹೆಸರಲ್ಲಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಲೋಕಾಯುಕ್ತ ಮಾಜಿ ಹೆಡ್ ಕಾನ್ಸ್ ಟೇಬಲ್ ನಿಂಗಪ್ಪ ಸಾವಂತ್ ವಿರುದ್ಧದ ಎಫ್ ಐ ಆರ್ ಹಾಗೂ ಮುಂದಿನ ನ್ಯಾಯ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ನಿಂಗಪ್ಪ ಸಾವಂತ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ, ಎಫ್ ಐ ಆರ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಪ್ರತಿವಾದಿ ಲೋಕಾಯುಕ್ತ ಪೊಲೀಸ್ ಪರ ವಿಶೇಷ ಪ್ರಾಸಿಕ್ಯೂಟರ್ ಗೆ ನೋಟಿಸ್ ಜಾರಿ ಮಾಡಿ ಆದೇಶಿಸಿ, ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular