ಬೆಂಗಳೂರು : 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ.ಕ್ರಿಶ್ಚಿಯನ್. ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ)ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದನ್ವಯ 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ.ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ)ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ :30.09.2025 ರೊಳಗಾಗಿ http://ssp.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
You Might Also Like
TAGGED:ಶುಲ್ಕ ಮರುಪಾವತಿ