HomeLatest NewsBREAKING: ರಾಜ್ಯದಲ್ಲಿ ಇಂದು ಶತಕ ದಾಟಿದ ಕೊರೋನಾ: ಒಂದೇ ದಿನ 106 ಜನರಿಗೆ ಸೋಂಕು ದೃಢ

BREAKING: ರಾಜ್ಯದಲ್ಲಿ ಇಂದು ಶತಕ ದಾಟಿದ ಕೊರೋನಾ: ಒಂದೇ ದಿನ 106 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2215ಕ್ಕೆ ಏರಿಕೆಯಾಗಿದೆ. ಇಂದು 174 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 1806 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 398 ಸಕ್ರಿಯ ಪ್ರಕರಣಗಳಿದ್ದು, ಐದು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 412 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 25.7ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular