HomeLatest Newsಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಯೋಜನೆಗೆ ಸಂಪುಟ...

ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಯೋಜನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular