HomeLatest NewsBIG NEWS: ಸರ್ಕಾರಿ ಸ್ವತ್ತುಗಳಿಗೆ ಜೀವಂತ ವ್ಯಕ್ತಿಗಳ ಹೆಸರು: ಹೈಕೋರ್ಟ್ ಮಹತ್ವದ ಸೂಚನೆ

BIG NEWS: ಸರ್ಕಾರಿ ಸ್ವತ್ತುಗಳಿಗೆ ಜೀವಂತ ವ್ಯಕ್ತಿಗಳ ಹೆಸರು: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ದಾವಣಗೆರೆ ಸರ್ಕಾರಿ ಸ್ವತ್ತುಗಳಿಗೆ ಜೀವಂತ ವ್ಯಕ್ತಿಗಳ ಹೆಸರು ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಾಲ್ಕು ವಾರಗಳಲ್ಲಿ ಕ್ರಮಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ದಾವಣಗೆರೆಯಲ್ಲಿ ಸರ್ಕಾರಿ ಆಸ್ತಿಗಳಿಗೆ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ ಅವರ ಹೆಸರು ನಾಮಕರಣ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಎ.ಸಿ. ರಾಘವೇಂದ್ರ ಸಲ್ಲಿಸಿದ್ದ ಪಿಎಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 4 ವಾರಗಳಲ್ಲಿ ಅರ್ಜಿದಾರರ ಮನವಿ ಪರಿಗಣಿಸಿ ತೀರ್ಮಾನಿಸಿ ಎಂದು ಆದೇಶಿಸಿದೆ.

ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಕುರಿತಾಗಿ ಸೂಚನೆ ನೀಡಲಾಗಿದೆ. ಸರ್ಕಾರಿ ಸ್ವತ್ತಿಗೆ ಜೀವಂತವಿರುವವರ ಹೆಸರಿಡದಂತೆ ಹೈಕೋರ್ಟ್ ಸೂಚಿಸಿತ್ತು. ಸ್ವಂತ ಆಸ್ತಿಗೆ ಬೇಕಿದ್ದರೆ ಹೆಸರು ಇಟ್ಟುಕೊಳ್ಳಬಹುದು ಎಂದು 2012ರಲ್ಲಿ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದನ್ನೇ ಆಧರಿಸಿ ಕ್ರಮ ಕೋರಿದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular