HomeLatest NewsBIG NEWS: ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ 200 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣ

BIG NEWS: ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ 200 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ 200 ಕೋಟಿ ರೂಪಾಯಿ ವೆಚ್ಚದಲ್ಲಿ 200 ಅಡಿ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ಒಳಗೊಂಡ ಅಂಬೇಡ್ಕರ್ ಥೀಮ್ ಪಾರ್ಕ್ ಮತ್ತು ಸಂವಿಧಾನ ಮ್ಯೂಸಿಯಂ ಸ್ಥಾಪನೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ಸಭೆ ನಡೆಸಲಾಗಿದೆ.

ಬಜೆಟ್ ನಲ್ಲಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನ ಮ್ಯೂಸಿಯಂ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು.

ಬೆಂಗಳೂರು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸಂಸ್ಥೆ ಮತ್ತು ಬೆಂಗಳೂರು ವಿವಿ ಜೊತೆಗೆ ಈ ಕುರಿತಾಗಿ ಚರ್ಚಿಸಿದ್ದು, ಬೆಂಗಳೂರು ವಿವಿ ಜ್ಞಾನ ಭಾರತೀಯ ಮುಖ್ಯದ್ವಾರದಿಂದ ಎನ್.ಎಸ್.ಎಸ್. ಕೇಂದ್ರ ಮಧ್ಯ ಭಾಗದಲ್ಲಿ ಲಭ್ಯವಿರುವ 25 ಎಕರೆ ಜಾಗ ಸೂಕ್ತ ಎಂದು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಉನ್ನತ ಶಿಕ್ಷಣ ಇಲಾಖೆ ಸಚಿವ ಎಂ.ಸಿ. ಸುಧಾಕರ್ ಸೇರಿದಂತೆ ಹಲವರು ಸಭೆಯಲ್ಲಿ ಹಾಜರಿದ್ದರು.

ಥೀಮ್ ಪಾರ್ಕ್ ನಲ್ಲಿ ಅಂಬೇಡ್ಕರ್ ಅವರ 200 ಅಡಿ ಎತ್ತರದ ಪ್ರತಿಮೆ, ಅಂಬೇಡ್ಕರ್ ಅವರ ಬದುಕು –ಬರಹ, ಸಾಧನೆ, ಭಾರತ ಸಂವಿಧಾನ ರಚನೆಯ ಇತಿಹಾಸದ ಬಗ್ಗೆ ಮ್ಯೂಸಿಯಂ ಸ್ಥಾಪಿಸಲಾಗುವುದು. ಅಂಬೇಡ್ಕರ್ ಸ್ಮಾರಕ ಬೃಹತ್ ಗ್ರಂಥಾಲಯ, ಬೌದ್ಧ ಸ್ತೂಪಗಳು, ವಿವಿಧ ಶಿಲ್ಪ ಕಲಾಕೃತಿಗಳು, ಕಾನ್ಫರೆನ್ಸ್ ಹಾಲ್, ಮಿನಿ ಥಿಯೇಟರ್, ಉದ್ಯಾನವನ, ಸಂಗೀತ ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular