‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಣ ಪಾವತಿಗೆ ತಾಂತ್ರಿಕ ಸಮಸ್ಯೆ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದೆ. ಮೇ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಬೇಕಿದ್ದು, ಈ ಮೊತ್ತ ಆರ್ಥಿಕ ಇಲಾಖೆಯಿಂದ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಮೂಲಕ ಈ ಹಣ ಸಂದಾಯವಾಗಬೇಕು ಎನ್ನುವುದು ಕೇಂದ್ರದ ನಿಯಮ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಿಸಲು ವಿಳಂಬವಾಗುತ್ತಿದೆ. ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನೋಂದಣಿ ಮಾಡಿಸಿಕೊಂಡ ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read