HomeLatest NewsBREAKING: ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ವೇಳೆ ದಾಳಿ ಮಾಡಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

BREAKING: ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ವೇಳೆ ದಾಳಿ ಮಾಡಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬೆಂಗಳೂರು: ಆರತಕ್ಷತೆಯ ವೇಳೆ ದಾಳಿ ನಡೆಸಿ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಆರತಕ್ಷತೆ ತಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಚನ್ನಪ್ಪ ಸುಬ್ಬಮ್ಮ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ.

ಪೋಷಕರು 17 ವರ್ಷದ ಬಾಲಕಿಗೆ ಮದುವೆ ಮಾಡಿಸುತ್ತಿದ್ದರು. ವಿಷಯ ತಿಳಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ದೂರಿನ ಮೇರೆಗೆ ಪೋಲಿಸರೊಂದಿಗೆ ದಾಳಿ ನಡೆಸಿ ಆರತಕ್ಷತೆ ವೇಳೆಯಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲಾಗಿದೆ. ಪೋಷಕರು, ವರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧವೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular