HomeLatest Newsರಾಜ್ಯದಲ್ಲಿ ತಗ್ಗಿದ ಮಳೆ, ಮುಂದಿನ ಒಂದು ವಾರ ಮಳೆ ಪ್ರಮಾಣ ಇಳಿಮುಖ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ತಗ್ಗಿದ ಮಳೆ, ಮುಂದಿನ ಒಂದು ವಾರ ಮಳೆ ಪ್ರಮಾಣ ಇಳಿಮುಖ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 3-4 ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30- 40 ಕಿ.ಮೀ., ಒಳನಾಡು ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಜೂನ್ 20 ಮತ್ತು 21 ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್ 20ರಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular