HomeLatest NewsBIG NEWS : ರೈತರು 'ಡಿಎಪಿ' ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ...

BIG NEWS : ರೈತರು ‘ಡಿಎಪಿ’ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸಲಹೆ

ರೈತರು ಬೆಳೆಗಳಲ್ಲಿ ಗುಣಮಟ್ಟದ ಇಳುವರಿ ಪಡೆಯಲು ಡಿಎಪಿ ಗೊಬ್ಬರದ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಹೇಳಲಾಗುತ್ತದೆ.

ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ. ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆAದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮಬೀರಿ ಇಳುವರಿ ಕುಂಠಿತವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಅಧಾರ. ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ.

ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕು.

*ರೈತರು ಅನುಸರಿಸಬೇಕಾದ ಕ್ರಮ:*

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊAದಿಗೆ ಬಳಸಬಹುದು.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ:ರಂಜಕ:ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿದೆ. ಹಾಗಾಗಿ ರೈತರು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆ ಮಾಡಬೇಕು.

ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10.26.26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ.

ವಿವಿಧ ಹಂತಗಳಲ್ಲಿ ಜರಗುವ ತರಬೇತಿಗಳು, ಕಾರ್ಯಗಾರಗಳು, ಅಭಿಯಾನಗಳಲ್ಲಿ ಕಡ್ಡಾಯವಾಗಿ ರೈತರಿಗೆ ರಸಗೋಬ್ಬರ ಮಾರಾಟಗಾರರು ಮಾರಾಟ ಮಾಡುವಾಗ ಪೊಟ್ಯಾಷಯುಕ್ತ ಸಂಯುಕ್ತ ರಸಗೋಬ್ಬರಗಳ ಉಪಯುಕ್ತತೆಯ ಬಗ್ಗೆ ಸೂಚನೆಯನ್ನು ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular