HomeLatest Newsಹೊಲಿಗೆ ಯಂತ್ರ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಹೊಲಿಗೆ ಯಂತ್ರ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ : ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಚಿತ್ರದುರ್ಗ ಸೇವಾ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಸೊಸೈಟಿ ತರಬೇತಿ ಸಂಸ್ಥೆಯ ಮೂಲಕ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಹತ್ತಿರದ ಬುರುಜನಹಟ್ಟಿ ಕ್ರಾಸ್ ಹೊಳಲ್ಕೆರೆ ರಸ್ತೆಯ ಸೇವಾ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಸೊಸೈಟಿ ಸಂಸ್ಥೆಗೆ ಭೇಟಿ ನೀಡಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇದೇ ಜೂನ್ 25 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸೇವಾ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಸೊಸೈಟಿ ದೂರವಾಣಿ ಸಂಖ್ಯೆ 8310509334 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular