HomeLatest NewsRAIN ALERT: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ

RAIN ALERT: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಳಗಾವಿ, ಬಾಗಲಕೋಟೆ, ಬೀದರ್, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ತುಮಕೂರು, ವಿಜಯನಗರ, ಮಂಡ್ಯ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular