HomeLatest NewsBIG NEWS : 'ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ'ಕ್ಕೆ ಮುಹೂರ್ತ ಫಿಕ್ಸ್ : ಆಗಸ್ಟ್ 11...

BIG NEWS : ‘ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ’ಕ್ಕೆ ಮುಹೂರ್ತ ಫಿಕ್ಸ್ : ಆಗಸ್ಟ್ 11 ರಿಂದ ಆರಂಭ.!

ಬೆಂಗಳೂರು : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.

ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಕಾನೂನು ರಚನೆಗೆ ಈ ಅವಕಾಶವನ್ನು ಸರ್ಕಾರ ಬಳಸಿಕೊಳ್ಳಲಿದೆ. ಈ ವೇಳೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಶ ಹಲವು ಅಸ್ತ್ರಗಳನ್ನು ಮುಂದಿಟ್ಟುಕೊಂಡು ಜಟಾಪಟಿ ನಡೆಸುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular