HomeLatest NewsBREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : BBMP 'DCF'...

BREAKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : BBMP ‘DCF’ ವರ್ಗಾವಣೆ.!

ಬೆಂಗಳೂರು : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಡಿಸಿಎಫ್ ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿ ಡಿಸಿಎಫ್ ಬಿಎಲ್ ಜಿ ಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ವಾಮಿ ಜಾಗಕ್ಕೆ ಚಿಕ್ಕಮಗಳೂರು ಡಿಸಿಎಫ್ G.K ಸುದರ್ಶನ್ ನೇಮಿಸಿ ಆದೇಶ ಹೊರಡಿಸಲಾಗಿದೆ.

ಜೂನ್ 15ರಂದು ಬನಶಂಕರಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಷಯ್ ತಲೆಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ಕಳೆದುಕೊಂಡಿದ್ದ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಸಾವಿನಲ್ಲೂ ನೋವಿನ ನಡುವೆ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ. ಅಕ್ಷಯ್ ನ ಎರಡೂ ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ನೀಡಲು ಮುಂದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular