ಬೆಂಗಳೂರು : ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಸಿಎಂ , ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದಾರೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ನಿನ್ನೆಯೇ ( ಜೂ.19) ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿತ್ತು, ಆದರೆ ಕೊನೆ ಕ್ಷಣದಲ್ಲಿ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆದಿತ್ತು. ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ರದ್ದಾಗಿದ್ದು, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮುಂದಿನ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
You Might Also Like
TAGGED:ನಂದಿಬೆಟ್ಟ