BIG NEWS : ರಾಜ್ಯದ KPS, BPS, ಪಿ.ಎಂ.ಶ್ರೀ ಶಾಲೆಗಳಲ್ಲಿ ಮಕ್ಕಳ ಗರಿಷ್ಠ ‘ದಾಖಲಾತಿ ಮಿತಿ’ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ಪಬ್ಲಿಕ್ ಶಾಲೆ (KPS), ಬೆಂಗಳೂರು ಪಬ್ಲಿಕ್ ಶಾಲೆ (BPS) ಹಾಗೂ ಪಿ.ಎಂ ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ (Bilingual Classes) ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿಯನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಪಬ್ಲಿಕ್ ಶಾಲೆ, (KPS), ಬೆಂಗಳೂರು ಪಬ್ಲಿಕ್ ಶಾಲೆ (BPS) ಹಾಗೂ ಪಿ.ಎಂ ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ (Bilingual Classes) ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿಯನ್ನು ಈ ಕೆಳಕಂಡಂತೆ ಹೆಚ್ಚಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿಸಿದೆ.

  • ವಿಭಾಗ ಪೂರ್ವ ಪ್ರಾಥಮಿಕ ಶಾಲೆ : ಗರಿಷ್ಟ ಮಿತಿ 40
  • ಪ್ರಾಥಮಿಕ ಶಾಲೆ : ಗರಿಷ್ಟ ಮಿತಿ 50
  • .ಪ್ರೌಢ ಶಾಲೆ : ಗರಿಷ್ಟ ಮಿತಿ 50

  • ಷರತ್ತುಗಳು
  • 2025-26ನೇ ಶೈಕ್ಷಣಿಕ ಸಾಲಿನಿಂದಲೇ ಮೇಲಿನಂತೆ ಎಲ್ಲಾ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳದ ಮಿತಿಯ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸುತ್ತೋಲೆ ಹೊರಡಿಸಿ ನಿಯಮಗಳಂತೆ ಅನುಷ್ಠಾನಗೊಳಿಸಲು ಕ್ರಮವಹಿಸತಕ್ಕದ್ದು.
  • ಪೂರ್ವ ಪ್ರಾಥಮಿಕ ವಿಭಾಗದ ಪ್ರತಿ ತರಗತಿಯ ಶಿಕ್ಷಕ/ಶಿಕ್ಷಕಿಯ ಜೊತೆ ಒಂದು ಆಯಾ ಕಡ್ಡಾಯವಾಗಿ ಇರತಕ್ಕದ್ದು. ಶಾಲಾ ಆವರಣದಲ್ಲಿ ಲಭ್ಯವಿರುವ ಕಟ್ಟಡಗಳನ್ನು ಹಾಗೂ ಇನ್ನಿತರ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ದಾಖಲಾತಿ ಹಾಗು ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯ ಅವಕಾಶ ಮಾಡಿ ಕೊಡುವುದು ಎಂದು ತಿಳಿಸಿದೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read