HomeLatest Newsಸಾರ್ವಜನಿಕರೇ ಗಮನಿಸಿ: ವಿಧಾನಸೌಧ, ವಿಕಾಸಸೌಧಗಳಲ್ಲಿ ಅಳವಡಿಸಲು 'ಕನ್ನಡತನ ಬಿಂಬಿಸುವ ಘೋಷವಾಕ್ಯ' ಕಳಿಸಿ

ಸಾರ್ವಜನಿಕರೇ ಗಮನಿಸಿ: ವಿಧಾನಸೌಧ, ವಿಕಾಸಸೌಧಗಳಲ್ಲಿ ಅಳವಡಿಸಲು ‘ಕನ್ನಡತನ ಬಿಂಬಿಸುವ ಘೋಷವಾಕ್ಯ’ ಕಳಿಸಿ

ವಿಧಾನಸೌಧ ಮತ್ತು ವಿಕಾಸಸೌಧದ ಕಟ್ಟಡಗಳಿಗೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸಿದ್ದು, ಸಾರ್ವಜನಿಕರಿಂದ ಘೋಷವಾಕ್ಯಗಳನ್ನು ಆಹ್ವಾನಿಸಿದೆ. ಸಾರ್ವಜನಿಕರು ಕನ್ನಡ ಮತ್ತು ಕರ್ನಾಟಕದ ಕುರಿತಾದ ಘೋಷವಾಕ್ಯಗಳನ್ನು ಕಳುಹಿಸಬಹುದಾಗಿದೆ. ಸಾಹಿತ್ಯಿಕ ಘೋಷವಾಕ್ಯಗಳಲ್ಲದೆ, ಜನಪದದ ಸೂಕ್ತಿಗಳು, ಚಳವಳಿಗಳ ಘೋಷಣೆಗಳು, ಸಿನಿಮಾ ಗೀತೆಗಳನ್ನು ಸಹ ಅವಲೋಕಿಸಿ ಮೌಲ್ಯಯುತ ಸಲಹೆಗಳನ್ನು ನೀಡಬಹುದಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಿರಾಶಾದಾಯಕ ನುಡಿಗಳು, ವಿವಾದಾತ್ಮಕ ಹೇಳಿಕೆಗಳನ್ನು ಪರಿಗಣಿಸಲಾಗುವುದಿಲ್ಲ. ಗರಿಷ್ಠ ಎರಡು ಸಾಲುಗಳಲ್ಲಿ ಈ ಘೋಷವಾಕ್ಯಗಳು ಇರಬೇಕು. ರಚನೆಕಾರರ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು. [email protected] ಗೆ ಘೋಷವಾಕ್ಯ ಕಳುಹಿಸಬೇಕು. ಜೂನ್‌ 30 ಕೊನೆಯ ದಿನಾಂಕ. ಸಂಪರ್ಕ ಸಂಖ್ಯೆ ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು’ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular