HomeLatest Newsಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ.23 ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಹತೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ  ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ)ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular