HomeLatest Newsನಾಳೆ ವಿಶ್ವದಾಖಲೆಗೆ ಸಜ್ಜಾಗಿರುವ ವಿಶಾಖಪಟ್ಟಣ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ನಾಳೆ ವಿಶ್ವದಾಖಲೆಗೆ ಸಜ್ಜಾಗಿರುವ ವಿಶಾಖಪಟ್ಟಣ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ವಿಶಾಖಪಟ್ಟಣ: ನಾಳೆ ದೇಶದಂತೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶಾಖಪಟ್ಟಣದಲ್ಲಿ ಅದ್ದೂರಿಯಾಗಿ ಯೋಗ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ 6.30ಕ್ಕೆ ಪ್ರಧಾನಿ ಮೋದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. 26 ಕಿಲೋಮೀಟರ್ ಉದ್ದದ ಕಾರಿಡಾರ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಆರ್.ಕೆ. ಬೀಚ್ ನಿಂದ ಭೋಗಪುರಂವರೆಗೆ 26 ಕಿಲೋಮೀಟರ್ ಉದ್ದದ ಕಾರಿಡಾರ್ ನಲ್ಲಿ ಯೋಗ ದಿನಾಚರಣೆ ನಡೆಯಲಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಯೋಗ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಪ್ರದರ್ಶಿಸಲಾಗುವುದು. ಸುಮಾರು 25000 ಬುಡಕಟ್ಟು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಯೋಗ ದಿನದಂದು ಹೊಸ ವಿಶ್ವ ದಾಖಲೆಗೆ ಆಂಧ್ರ ಸರ್ಕಾರ ಸಜ್ಜಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular