ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ೧. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ . ಅಧಿಸೂಚನೆಯಂತೆ ಹೊರಡಿಸಲಾಗಿತ್ತು. ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ಈ ಕೆಳಕಂಡ ಅನುಬಂಧ-2 ರಲ್ಲಿರುವಂತೆ ಪರಿಷ್ಕರಿಸಿದೆ. ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಎಲ್ಲಾ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.




