HomeLatest NewsJOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ :  ಜೂ.23 ರಂದು ಬಳ್ಳಾರಿಯಲ್ಲಿ 'ಉದ್ಯೋಗ ಮೇಳ' ಆಯೋಜನೆ

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ :  ಜೂ.23 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ.23 ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

*ವಿದ್ಯಾರ್ಹತೆ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular