HomeLatest Newsಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: KPS, BPS, ಪಿಎಂಶ್ರೀ ಶಾಲೆಗಳಲ್ಲಿ ದಾಖಲಾತಿ ಮಿತಿ...

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: KPS, BPS, ಪಿಎಂಶ್ರೀ ಶಾಲೆಗಳಲ್ಲಿ ದಾಖಲಾತಿ ಮಿತಿ ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆ(KPS), ಬೆಂಗಳೂರು ಪಬ್ಲಿಕ್ ಶಾಲೆ(BPS) ಮತ್ತು ಪಿಎಂ ಶ್ರೀ ಶಾಲೆಗಳಲ್ಲಿ ಪ್ರವೇಶಕ್ಕೆ ಬೇಡಿಕೆ ಭಾರಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ಪ್ರತಿ ವಿಭಾಗದ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಶುಕ್ರವಾರ ಆದೇಶಿಸಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಈ ಆದೇಶ ಜಾರಿಗೆ ಬರಲಿದೆ. ಪೂರ್ವ ಪ್ರಾಥಮಿಕ ವಿಭಾಗದಲ್ಲಿ(ಎಲ್.ಕೆ.ಜಿ. ಮತ್ತು ಯುಕೆಜಿ) ಪ್ರತಿ ತರಗತಿಗೆ ಇದುವರೆಗೆ ಗರಿಷ್ಠ 30 ಮಕ್ಕಳ ದಾಖಲಾತಿಗೆ ಅವಕಾಶವಿತ್ತು. ಇದನ್ನು 40 ಮಕ್ಕಳಿಗೆ ಹೆಚ್ಚಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಒಂದರಿಂದ 10ನೇ ತರಗತಿಗಳಲ್ಲಿ ಪ್ರತಿ ವಿಭಾಗಕ್ಕೆ ಗರಿಷ್ಠ 50 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 308 ಕೆಪಿಎಸ್, ಬಿಪಿಎಸ್ ಶಾಲೆಗಳಿದ್ದು, ಅವುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. ಈ ಶಾಲೆಗಳಲ್ಲಿ ಗರಿಷ್ಠ ದಾಖಲಾತಿ ಮಿತಿ ಹೆಚ್ಚಿಸಲು ಎಸ್.ಡಿ.ಎಂ.ಸಿ.ಗಳು, ಪೋಷಕರು ಹಾಗೂ ಸ್ಥಳೀಯರಿಂದ ಭಾರಿ ಬೇಡಿಕೆ ಇತ್ತು. ಇದನ್ನು ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular