HomeLatest NewsBIG NEWS: ಮಹಿಳೆಯರು ಪಾಸ್ ಪೋರ್ಟ್ ಗೆ ಸಲ್ಲಿಸುವ ಅರ್ಜಿಗೆ ಪತಿ ಸಹಿ, ಅನುಮತಿ ಅಗತ್ಯವಿಲ್ಲ:...

BIG NEWS: ಮಹಿಳೆಯರು ಪಾಸ್ ಪೋರ್ಟ್ ಗೆ ಸಲ್ಲಿಸುವ ಅರ್ಜಿಗೆ ಪತಿ ಸಹಿ, ಅನುಮತಿ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಚೆನ್ನೈ: ಮಹಿಳೆಯರು ಪಾಸ್ಪೋರ್ಟ್ ಪಡೆದುಕೊಳ್ಳಲು ಸಲ್ಲಿಸುವ ಅರ್ಜಿಗೆ ಪತಿಯ ಅನುಮತಿ ಮತ್ತು ಸಹಿ ಅವಶ್ಯಕತೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಹಿಳೆಯೊಬ್ಬರು ಸಲ್ಲಿಸಿದ್ದ ಈ ಕುರಿತಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.

2023ರಲ್ಲಿ ನಾವು ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದೇವೆ. ಆದರೆ, ಪ್ರಾದೇಶಿಕ ಪಾಸ್ಪೋರ್ಟ್ ವಿತರಣಾ ಕೇಂದ್ರವು ಪತಿಯ ಸಹಿ ಎಲ್ಲ ಎನ್ನುವ ಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸಿದೆ ಎಂದು ರೇವತಿ ಎನ್ನುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಪತಿಯ ಸಹಿ ಬೇಕು ಎನ್ನುವುದು ಮಹಿಳೆಯನ್ನು ಆತಂಕಕ್ಕೆ ದೂಡಿದಂತಾಗುತ್ತದೆ. ಅವರು ಪತಿಯ ಸಹಿ ಪಡೆಯಲು ಹೇಗೆ ಸಾಧ್ಯವಾಗುತ್ತದೆ ಎಂದು ನ್ಯಾಯಪೀಠ ಪ್ರಶ್ನಿಸಿದ್ದು, ಪಾಸ್ಪೋರ್ಟ್ ಗೆ ಪತಿಯ ಸಹಿ ಅನುಮತಿ ಅಗತ್ಯವಿಲ್ಲವೆಂದು ತೀರ್ಪು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular