HomeLatest NewsGOOD NEWS : ರಾಜ್ಯ ಸರ್ಕಾರದಿಂದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : 5...

GOOD NEWS : ರಾಜ್ಯ ಸರ್ಕಾರದಿಂದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರದಿಂದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ನೀಡುವುದಾಗಿ ಸರ್ಕಾರ ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಕೈಗೊಳ್ಳಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಏಳುಕೋಟಿ ಕನ್ನಡಿಗರು ನಮ್ಮ ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಮೇ 20ಕ್ಕೆ ಎರಡು ವರ್ಷ. ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು “ಸರ್ವಜನಾಂಗದ ಶಾಂತಿಯ ತೋಟ”ವಾಗಿಸುವತ್ತ ಪ್ರಾಮಾಣಿಕವಾಗಿ ಶ್ರಮಿಸಿದ ಸಂತೃಪ್ತಿ ನಮ್ಮದು. ಸಾಧಿಸಿದ್ದು ಒಂದಷ್ಟಾದರೆ, ಸಾಧಿಸಬೇಕಿರುವುದು ಬಹಳಷ್ಟಿದೆ ಎಂಬುದರ ಅರಿವು ನಮಗಿದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ನಿಮ್ಮ ಸಹಕಾರ ಎಂದಿನಂತೆ ನಮ್ಮೊಂದಿಗಿರಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular