ಬೆಂಗಳೂರು : ವಿಶ್ವಕ್ಕೆ ಭಾರತ ನೀಡಿದ ಅನನ್ಯ ಕಾಣಿಕೆ ಯೋಗ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಯೋಗ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ವಿಶ್ವಕ್ಕೆ ಭಾರತ ನೀಡಿದ ಅನನ್ಯ ಕಾಣಿಕೆ ಯೋಗ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡುವುದರ ಜೊತೆಗೆ ವ್ಯಕ್ತಿಯನ್ನು ಸದಾ ಚೈತನ್ಯಯುತವಾಗಿರುವಂತೆ ಮಾಡುತ್ತದೆ. ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಯೋಗವೆಂಬ ಅಮೂಲ್ಯ ಸಾಧನದ ಮೂಲಕ ಸ್ವಸ್ಥ, ಸುಂದರ ಬದುಕು ಕಟ್ಟಿಕೊಳ್ಳೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

