HomeLatest NewsBIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ದೇಶದಲ್ಲೇ ಮೊದಲ ಬಾರಿಗೆ ಸಂಪೂರ್ಣ...

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ: ದೇಶದಲ್ಲೇ ಮೊದಲ ಬಾರಿಗೆ ಸಂಪೂರ್ಣ ಯೋಗ ಜಿಲ್ಲೆಯಾಗಿ ಮೈಸೂರು

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆಯುಷ್ ಇಲಾಖೆ ವತಿಯಿಂದ ವಿಧಾನಸೌಧ ಮೆಟ್ಟಿಲುಗಳ ಮೇಲೆ ಶನಿವಾರ ಹಮ್ಮಿಕೊಂಡಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

 ಯೋಗ ವಿಶ್ವಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದ್ದು, ಹೆಚ್ಚಿನ ಜನರಿಗೆ ಇದನ್ನು ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯಾಗಿ ಮಾಡಲು ಯೋಜನೆ ರೂಪಿಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗ್ಯ ಅಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸುವ ಗುರಿ ಹೊಂದಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಪರಂಪರಾಗತವಾಗಿ ಬಂದಿರುವ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೇ, 5,000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಹೇಳಿಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular