HomeLatest NewsBREAKING: ಗ್ಯಾಸ್ ಟ್ಯಾಂಕರ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 30 ಜನರಿಗೆ ಗಾಯ, 10...

BREAKING: ಗ್ಯಾಸ್ ಟ್ಯಾಂಕರ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 30 ಜನರಿಗೆ ಗಾಯ, 10 ಮಂದಿ ಗಂಭೀರ

ಹಾಸನ: ಗ್ಯಾಸ್ ಟ್ಯಾಂಕರ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ 30 ಪ್ರಯಾಣಿಕರು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

ಭೀಕರ ಅಪಘಾತದಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಸಕಲೇಶಪುರದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಗ್ಯಾಸ್ ಟ್ಯಾಂಕರ್ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಓವರ್ ಟೇಕ್ ವೇಳೆ ನಿಯಂತ್ರಣ ತಪ್ಪಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡವರನ್ನು ಹಾಸನ, ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉಳಿದ ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular