HomeLatest Newsರೈತರೇ ಗಮನಿಸಿ: ಬೆಳೆ ಹಾನಿ ಪರಿಹಾರ, ಬೆಂಬಲ ಬೆಲೆ ಪಡೆಯಲು ತಾವು ಬೆಳೆದ ಮುಂಗಾರು ಹಂಗಾಮಿನ...

ರೈತರೇ ಗಮನಿಸಿ: ಬೆಳೆ ಹಾನಿ ಪರಿಹಾರ, ಬೆಂಬಲ ಬೆಲೆ ಪಡೆಯಲು ತಾವು ಬೆಳೆದ ಮುಂಗಾರು ಹಂಗಾಮಿನ ‘ಬೆಳೆ ಸಮೀಕ್ಷೆ’ ದಾಖಲಿಸಿ

2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಮಾಹಿತಿಯನ್ನು ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್. ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡಲು ಬಳಸಲಾಗುತ್ತದೆ.

ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಳೆ ವಿವರ ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2025-26” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಪಿ.ಆರ್‌ಗಳನ್ನು ನೇಮಿಸಲಾಗಿದೆ.

 ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಗೂಗಲ್ ಪ್ಲೇ-ಸ್ಟೋರ್‌ನಲ್ಲಿ Kharif season Farmer Crop Survey 2025-26” ಎಂಬ ಹುಡುಕಿ ಅಥವಾQR code ಅನ್ನು ಸ್ಕ್ಯಾನ್ ಮಾಡಿಕೊಂಡು ಮೊಬೈಲ್ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳುವುದು. ಮೊಬೈಲ್ ಆಪ್‌ನಲ್ಲಿ ರೈತರ ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಮೊಬೈಲ್ ಆಪ್‌ನಲ್ಲಿ ಇ-ಕೆವೈಸಿ ಮೂಲಕ ಸಕ್ರಿಯಗೊಳಿಸುವುದು. ನಂತರ ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆಪ್‌ಗೆ ಸೇರಿಸಿಕೊಳ್ಳಬೇಕು. ನಂತರ ತಾವು ಬೆಳೆದ ವ್ಯಾಪ್ತಿ ಬೆಳೆಯ ವಿವರಗಳೊಂದಿಗೆ ಪ್ರತಿ ಬೆಳೆಯ 2 ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ಸರ್ಕಾರ ನಿಗದಿ ಪಡಿಸಿದ ಸಮಯದೊಳಗೆ ಅಪ್‌ಲೋಡ್ ಮಾಡಲು ಈ ಮೂಲಕ ಕೋರಲಾಗಿದೆ. ವಿವಿಧ ಸವಲತ್ತುಗಳನ್ನು ನೀಡಲು ಬಳಕೆ ಮಾಡುವುದರಿಂದ, ಕೂಡಲೇ ತಮ್ಮ ಜಮೀನನ್ನು ಬೆಳೆ ಸಮೀಕ್ಷೆಗೆ ಒಳಪಡಿಸಲು ಮತ್ತೊಮ್ಮೆ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಟೋಲ್ ಪ್ರೀ ಸಂಖ್ಯೆ 1800-425-3553 ಅಥವಾ ತಮ್ಮ ಜಮೀನಿನ ಬೆಳೆ ಸಮೀಕ್ಷೆಗಾಗಿ ಗ್ರಾಮದ ಪಿ.ಆರ್. ಗಳನ್ನು ಅಥವಾ ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular