ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಯೋಗ ತರಬೇತಿ ಕಡ್ಡಾಯ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚೆ: ದಿನೇಶ್ ಗುಂಡೂರಾವ್ ಭರವಸೆ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಯೋಗ ತರಬೇತಿ ನೀಡುವ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಲಹೆ ನೀಡಿದ್ದಾರೆ. ಮಕ್ಕಳ ಹಿತ ದೃಷ್ಟಿಯಿಂದಲೂ ಇದು ಒಳ್ಳೆಯ ಕಾರ್ಯಕ್ರಮವಾಗಿದೆ ಎಂದು ಹೇಳಿದ್ದಾರೆ.

ಶಾಲೆಗಳಲ್ಲಿ ಈಗಾಗಲೇ ಇರುವ ದೈಹಿಕ ಶಿಕ್ಷಕರಿಗೆ ಯೋಗದ ಬಗ್ಗೆ ತರಬೇತಿ ನೀಡಬೇಕು. ಬಳಿಕ ಈ ಶಿಕ್ಷಕರು ಮಕ್ಕಳಿಗೆ ಯೋಗ ಕಲಿಸಬೇಕಿದ್ದು, ಈ ಕುರಿತಾಗಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read