ಚಿಕ್ಕೋಡಿ: ಜಾತಿಯ ನೆಪ ಹೇಳಿ ಪ್ರೀತಿಸಿದ ಹುಡುಗ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸುಪ್ರೀತಾ ಬಾಬು ಹಣಮಂತಗೊಳ(21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅದೇ ಗ್ರಾಮದ ಸಂದೀಪ ಲಕ್ಷ್ಮಣ ಜೀನರಾಳೆಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದಳು. ಮದುವೆಯಾಗುವಂತೆ ಕೇಳಿದಾಗ ಜಾತಿ ನೆಪ ಹೇಳಿ ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಸುಪ್ರೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಕೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.