HomeLatest NewsBREAKING: ಪಹಲ್ಗಾಮ್ ಉಗ್ರರ ದಾಳಿ: ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್

BREAKING: ಪಹಲ್ಗಾಮ್ ಉಗ್ರರ ದಾಳಿ: ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್

ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ನಡೆದಿದ್ದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ- (NIA) ಬಂಧಿಸಿದೆ.

ಪಹಲ್ಗಾಮ್ ದಾಳಿಯಲ್ಲಿ 26 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆ ನಡೆದು ಎರಡು ತಿಂಗಳು ಕಳೆದಿವೆ. ಈ ದಾಳಿಯ ಉಗ್ರರಿಗೆ ಆಸ್ರಯ ನೀಡಿದ್ದ ಇಬ್ಬರನ್ನು ಇದೀಗ ಎನ್ ಐಎ ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತರನ್ನು ಪಹಲ್ಗಾಮ್ ನ ಬಟ್ಕೋಟೆಯ ಪರ್ವೇಜ್, ಅಹ್ಮದ್ ಜೋಥರ್ ಮತ್ತು ಪಹಲ್ಗಾಂ ನ ಹಿಲ್ ಪಾರ್ಕ್ ನ ಬಶಿರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಎನ್ ಐಎ ಪ್ರಕಾರ ಬಂಧಿತರು ದಾಳಿಯಲ್ಲಿ ಭಾಗಿಯಾಗಿರುವ ಮೂವರು ಶಸ್ತ್ರಸಜ್ಜಿತ ಉಗ್ರರ ಗುರುತನ್ನು ಬಹಿರಂಗಪಡಿಸಿದ್ದಾರೆ. ಅವರು ನಿಷೇಧಿತ ಭಯೋತ್ಪಾಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಸಂಬಂದ್ಜಿಸಿದ ಪಾಕಿಸ್ತಾನಿ ಪ್ರಜೆಗಳು ಎಂಬುದು ದೃಢಪಟ್ಟಿದೆ.

ದಾಳಿಗೂ ಮುನ್ನ ಪರ್ವೇಜ್ ಹಗೂ ಬಶೀರ್, ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಹಿಲ್ ಪಾರ್ಕ್ ನಲ್ಲಿರುವ ಕಾಲೋಚಿತ ಧೋಕ್ (ಗುಡಿಸಲು) ನಲ್ಲಿ ಆಶ್ರಯ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular