HomeLatest Newsಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಸ್ಟೆನೋಗ್ರಾಫರ್ ಗ್ರೂಪ್ ಸಿ, ಡಿ ಹುದ್ದೆಗೆ ಅರ್ಜಿ

ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಸ್ಟೆನೋಗ್ರಾಫರ್ ಗ್ರೂಪ್ ಸಿ, ಡಿ ಹುದ್ದೆಗೆ ಅರ್ಜಿ

ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಇಂಗ್ಲೀಷ್, ಹಿಂದಿ ಶೀಘ್ರಲಿಪಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ https://ssc.gov.in ಅಥವಾ  www.ssckkr.kar.nic.in     ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರೇಡ್-ಸಿ ಹುದ್ದೆಗೆ 18 ರಿಂದ 30 ವರ್ಷ, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು. ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ: 080-2527342/25502520 ಅಥವಾ 080-25520653 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular