BREAKING: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

ಲಖನೌ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಸಾಲು ಸಾಲು ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿದ್ದು, ತುರ್ತು ಭೂಸ್ಪರ್ಶ ಮಾಡಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇಂಡಿಗೋ ವಿಮಾನವೊಂದು ಟೇಕಾಫ್ ಆದ ಕೆಲ ಸಮಯದಲ್ಲೇ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಬೆಳಿಗ್ಗೆ 8:30ಕ್ಕೆ ಚಂಡೀಗಢದಿಂದ ಲಖನೌಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ ಆಗುತ್ತಿದ್ದಂತೆಯೇ ತಾಂತ್ರಿಕ ದೋಷ ಕಂಡು ಬಂದಿದ್ದು, ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ವಿಮಾನದಲ್ಲಿ 160 ಪ್ರಯಾಣಿಕರಿದ್ದರು. ಸದ್ಯ ವಿಮಾನವನ್ನು ಸುರಕ್ಷಿತವಾಗಿ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read