HomeLatest Newsಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಕೋರಿಕೆ, ಪರಸ್ಪರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಅರ್ಜಿ...

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಕೋರಿಕೆ, ಪರಸ್ಪರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಅರ್ಜಿ ಸಲ್ಲಿಕೆಗೆ ಜು. 5ರವರೆಗೆ ಅವಕಾಶ ವಿಸ್ತರಣೆ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆಯಿಂದ ಪರೀಕ್ಷಿತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಘಟಕದೊಳಗೆ ಮತ್ತು ಹೊರಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜು. 5ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು, ಎಲ್ಲಾ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಜೂನ್ 26 ರಿಂದ 30ರವರೆಗೆ ಶಾಲಾವಾರು, ವಿಷಯವಾರು, ವೃಂದವಾರು ಹುದ್ದೆಗಳಿಗೆ ಕಾರ್ಯನಿರತ ಶಿಕ್ಷಕರ ಮರು ಹೊಂದಾಣಿಕೆ ಮಾಡಬೇಕು. ಜುಲೈ 2ರಂದು ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆಗೆ ಕರಡು ಪಟ್ಟಿ ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.

ಆಡಳಿತಾತ್ಮಕ ಕಾರಣದಿಂದ ವೇಳಾಪಟ್ಟಿ ಪರಿಷ್ಕರಿಸಿದ್ದು, ಆದ್ಯತೆ ಕೋರುವ ಪ್ರಕರಣಗಳಲ್ಲಿ ಸಮರ್ಪಕ ದಾಖಲೆ ಸಲ್ಲಿಸದ ಶಿಕ್ಷಕರ ಅರ್ಜಿಗಳನ್ನು ತಿರಸ್ಕರಿಸುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ದಾಖಲೆಗಳ ಪರಿಶೀಲನೆಗೆ ಜುಲೈ 7, ಆಕ್ಷೇಪಣೆ ಪರಿಶೀಲಿಸಿ ತಾತ್ಕಾಲಿಕ ಆದ್ಯತಾ ಪಟ್ಟಿ ನೀಡಲು ಜುಲೈ 8, ಕೋರಿಕೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹೊಂದಾಣಿಕೆಗೆ ಜುಲೈ 15 ರಂದು ಕೌನ್ಸೆಲಿಂಗ್ ನಡೆಸಲು ತಿಳಿಸಲಾಗಿದೆ. ಶಿಕ್ಷಕರ ಅನುಕೂಲಕ್ಕೆ ಜುಲೈ 19ರಂದು ಖಾಲಿ ಹುದ್ದೆಗಳ ಪ್ರಕಟಣೆ, ಜುಲೈ 21 ರಂದು ವರ್ಗಾವಣೆಗೆ ಅರ್ಹರಾಗಿರುವ ಶಿಕ್ಷಕರ ಅಂತಿಮ ವೇಳಾಪಟ್ಟಿ ಪ್ರಕಟಿಸಲು ತಿಳಿಸಲಾಗಿದೆ. ಜು. 24ರಿಂದ ಕೌನ್ಸೆಲಿಂಗ್ ನಡೆಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular