HomeLatest Newsಭದ್ರಾ ಬಲದಂಡೆ ನಾಲೆಯಿಂದ ನೀರು ಪೂರೈಕೆ ಯೋಜನೆಗೆ ವಿರೋಧ: ಡ್ಯಾಂ ಬಳಿ ದಾವಣಗೆರೆ ರೈತರ ಪ್ರತಿಭಟನೆ

ಭದ್ರಾ ಬಲದಂಡೆ ನಾಲೆಯಿಂದ ನೀರು ಪೂರೈಕೆ ಯೋಜನೆಗೆ ವಿರೋಧ: ಡ್ಯಾಂ ಬಳಿ ದಾವಣಗೆರೆ ರೈತರ ಪ್ರತಿಭಟನೆ

ದಾವಣಗೆರೆ: ಭದ್ರಾ ಬಲದಂಡೆ ನಾಲೆಯಿಂದ ನೀರು ಪೂರೈಕೆ ಯೋಜನೆಗೆ ವಿರೋಧ ವ್ಯಕ್ತವಾಗಿದೆ. ಇಂದು ದಾವಣಗೆರೆ ಜಿಲ್ಲೆಯ ರೈತರು ಭದ್ರಾ ಡ್ಯಾಂ ಬಳಿ ಪ್ರತಿಭಟನೆ ಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪ ಇರುವ ಭದ್ರಾ ಡ್ಯಾಂ ಬಳಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಭದ್ರಾ ಜಲಾಶಯ ಪ್ರದೇಶಕ್ಕೆ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲೆಯ ರೈತರು ತೆರಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಿಕ್ಕಮಗಳೂರು ತರೀಕೆರೆ ಸೇರಿದಂತೆ 1,600 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ ದಾವಣಗೆರೆ ಜಿಲ್ಲೆ ರೈತರಿಗೆ ತೊಂದರೆಯಾಗುತ್ತದೆ. ಈ ಜಲಾಶಯದ ನೀರನ್ನೇ ನಂಬಿ ದಾವಣಗೆರೆ ಜಿಲ್ಲೆ ರೈತರು ಭತ್ತ, ಅಡಕೆ  ಬೆಳೆಯುತ್ತಿದ್ದಾರೆ. ಬಲದಂಡೆ ಕಾಲುವೆ ಸೀಳಲು ಬಿಡುವುದಿಲ್ಲ ಎಂದು ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನೇತೃತ್ವದಲ್ಲಿ ಭದ್ರಾ ಜಲಾಶಯಕ್ಕೆ ರೈತರು ತೆರಳಿದ್ದಾರೆ. ನಿನ್ನೆ ಸಂಜೆಯಿಂದ ಜಲಾಶಯದ ಬಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular