HomeLive NewsBREAKING: ತಮ್ಮದೇ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ; ರಾಜೀನಾಮೆ ಸುಳಿವು ನೀಡಿದ ರಾಜು...

BREAKING: ತಮ್ಮದೇ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ; ರಾಜೀನಾಮೆ ಸುಳಿವು ನೀಡಿದ ರಾಜು ಕಾಗೆ

ಬೆಳಗಾವಿ: ಕಾಂಗ್ರೆಸ್ ನ ಬಿ.ಆರ್.ಪಾಟೀಲ್ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸರ್ಕಾರದ ವಿರುದ್ಧ ಸಮಧಾನ ವ್ಯಕ್ತಪದಿಸಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ರಾಜು ಕಾಗೆ, ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ, ನಿಜ. ಅವರಪ್ಪನ ಹಾಗಾಗಿದೆ ನನ್ನ ಸ್ಥಿತಿ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಹಾಳಾಗಿದೆ. 25 ಕೋಟಿ ಅನುದಾನ ಬಿಡುಗಡೆಯಾಗಿ ಎರಡು ವರ್ಷಗಳಾದರೂ ಕಾಮಗಾರಿ ಕೆಲಸ ಆರಂಭವಾಗಿಲ್ಲ. ವರ್ಕ್ ಆರ್ಡರ್ ನೀಡುತ್ತಿಲ್ಲ ಎಂದರೆ ಏನರ್ಥ? ಎಂದು ಗುಡುಗಿದರು.

ಇದರಿಂದ ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ನಾನೂ ಸಹ ರಾಜೀನಾಮೆ ನೀಡುವ ಸ್ಥಿತಿ ಬಂದಿದೆ. ಇನ್ನೆರಡು ದಿನಗಳಲ್ಲಿ ಸಿಎಂ ಗೆ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular