HomeLatest NewsBIG NEWS: ಪ್ರೀತಿಸಿದ ಹುಡುಗಿಯಿಂದ ಕಿರುಕುಳ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

BIG NEWS: ಪ್ರೀತಿಸಿದ ಹುಡುಗಿಯಿಂದ ಕಿರುಕುಳ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯ ವಿರುದ್ಧವೇ ಕಿರುಕುಳ ಆರೋಪ ಮಾಡಿ ಸೆಲ್ಫೀ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ರಾಜಘಟ್ಟದಲ್ಲಿ ಈ ಘಟನೆ ನಡೆದಿದೆ. ಯುವಕ ಆತ್ಮಹತ್ಯೆಗೂ ಮುನ್ನ ಮಾಡಿಟ್ಟಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿರುವ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಲ್ಫಿ ವಿಡಿಯೋ ಮಾಡಿ ಯುವತಿಯ ವಿರುದ್ಧ ಆರೋಪ ಮಾಡಿದ್ದ ಮಂಜುನಾಥ್ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಯುವತಿಗೆ ಬೇರೊಬನ ಜೊತೆ ಸಂಬಂಧವಿದೆ ಎಂದು ಯುವತಿ ಬಗ್ಗೆಯೂ ಆರೋಪಿಸಿರುವ ಮಂಜುನಾಥ್ ಯುವತಿಯ ಕುಟುಂಬದವರ ವಿರುದ್ಧವೂ ಆರೋಪ ಮಾಡಿದ್ದಾನೆ.

ದೇವನಹಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಯುವತಿ ಹಾಗೂ ಆಕೆಯ ಕುಟುಂಬದವರು ನಾಪತ್ತೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular