ಗದಗ : ಗದಗದಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಇಬ್ಬರು ಮಕ್ಕಳು, ಶಿಕ್ಷಕರಿಗೆ ಗಂಭೀರ ಗಾಯವಾಗಿದೆ. ಅವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರು ಪಾಠ ಮಾಡುವಾಗಲೇ ಶಾಲೆಯ ಮೇಲ್ಙಾವಣಿ ಕುಸಿದಿದೆ ಎನ್ನಲಾಗಿದೆ. ಪರಿಣಾಮ ಶಿಕ್ಷಕ ಎಂಡಿ ಒಂಟಿ ಹಾಗೂ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದೆ.
ಇಬ್ಬರು ಮಕ್ಕಳ ತಲೆ ಹಾಗೂ ಶಿಕ್ಷಕರ ಭುಜಕ್ಕೆ ಗಂಭೀರ ಗಾಯಗಳಾಗಿದೆ ಹಾಗೂ ಶಾಲೆಯ ಪೀಠೋಪಕರಣಗಳಿಗೂ ಹಾನಿಯಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನೆ ಹಿನ್ನೆಲೆ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.
TAGGED:ಗದಗ