HomeLatest Newsಅವರೇ ಕರೆದ ಸರ್ವ ಪಕ್ಷ ಸಭೆಗೆ ಬಾರದ ಪ್ರಧಾನಿ ಮೋದಿ ಅಹಂಕಾರಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಅವರೇ ಕರೆದ ಸರ್ವ ಪಕ್ಷ ಸಭೆಗೆ ಬಾರದ ಪ್ರಧಾನಿ ಮೋದಿ ಅಹಂಕಾರಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಕಲಬುರಗಿ: ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಎಲ್ಲವೂ ಸರಿಯಾಗಿ ನಡೆಯಿತು. ಯುದ್ಧದ ವೇಳೆ ಎಲ್ಲರೂ ಒಂದಾಗಿ ಎಂದಾಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲರೂ ಒಂದಾಗಿದ್ದೆವು. ಆದರೆ, ಪ್ರಧಾನಿ ಮೋದಿಯವರೇ ಸರ್ವ ಪಕ್ಷ ಸಭೆಗೆ ಬರಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಲುವು ಮತ್ತು ಮುಂದಿನ ಕ್ರಮ ಹಾಗೂ ಕೈಗೊಂಡ ನಿರ್ಧಾರಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸರ್ವ ಪಕ್ಷ ಸಭೆಗೆ ಮೋದಿ ಅವರು ಪದೇ ಪದೇ ಗೈರು ಹಾಜರಾಗುತ್ತಾರೆ. ಇದು ಅವರು ತೋರುವ ಅಹಂಕಾರವಾಗಿದೆ ಎಂದು ಟೀಕಿಸಿದ್ದಾರೆ.

ತಾವೇ ಕರೆದ ಸರ್ವ ಪಕ್ಷ ಸಭೆಗೆ ಮೋದಿ ಅವರೇ ಬರಲಿಲ್ಲ. ಇದು ಅವರ ಅಹಂಕಾರ ತೋರಿಸುತ್ತದೆ. ಎಲ್ಲರೂ ಒಂದಾಗಿರುವ ಸಂದೇಶ ಕೊಟ್ಟರೆ ಒಳ್ಳೆಯದು, ಆದರೆ ಅವರೇ ಕರೆದ ಸಭೆಗೆ ಬರಲಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೈಲ ಅಮದು ಸೇರಿದಂತೆ ಇರಾನ್ ದೇಶದೊಂದಿಗೆ ಭಾರತ ಒಳ್ಳೆಯ ಸಂಬಂಧ ಹೊಂದಿದೆ. ಇಡೀ ವಿಶ್ವಕ್ಕೆ ಶಾಂತಿ ಬೇಕಿದೆ. ಯಾರಿಗೂ ಯುದ್ಧ ಬೇಡವಾಗಿದೆ. ಜಗತ್ತಿನಲ್ಲಿ ಇಂದು ನಡೆಯುತ್ತಿರುವ ಯುದ್ಧ ಯಾರಿಗೂ ಬೇಡವಾಗಿದೆ. ಯುದ್ಧದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಶಾಂತಿ ಅಗತ್ಯವಿದೆ. ಜಗತ್ತು ಶಾಂತಿಯನ್ನು ಬಯಸುತ್ತಿದೆ. ಆದರೆ ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಒಪ್ಪುವಂತಹದ್ದಲ್ಲ. ಯಾವುದೇ ಸಮಸ್ಯೆ ಇದ್ದರೂ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಖರ್ಗೆ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular