HomeLatest NewsBREAKING: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಭರ್ಜರಿ ಶತಕ

BREAKING: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಭರ್ಜರಿ ಶತಕ

ಲೀಡ್ಸ್: ಹೇಡಿಂಗ್ಲೇ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ್ದಾರೆ.

ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 471 ರನ್ ಗಳಿಸಿದ್ದು, ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್ ನಲ್ಲಿ 465 ರನ್ ಗಳಿಸಿತು. 6 ರನ್ ಗಳ ಇನಿಂಗ್ಸ್ ಮುನ್ನಡೆಯೊಂದಿಗೆ 2ನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 63.2 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 4, ಕೆ.ಎಲ್. ರಾಹುಲ್ ಅಜೇಯ 102, ಸಾಯಿ ಸುದರ್ಶನ್ 30, ಶುಭಮನ್ ಗಿಲ್ 8, ರಿಷಬ್ ಪಂತ್ ಅಜೇಯ 95 ರನ್ ಗಳಿಸಿದ್ದಾರೆ.

ಕೆ.ಎಲ್. ರಾಹುಲ್ 204 ಎಸೆತಗಳನ್ನು ಎದುರಿಸಿ 13 ಬೌಂಡರಿ ಸಹಿತ 102 ರನ್ ಗಳಿಸಿದ್ದಾರೆ. ಇದು ಟೆಸ್ಟ್ ನಲ್ಲಿ ಅವರ 9ನೇ ಶತಕವಾಗಿದೆ. ಇದು ಇಂಗ್ಲೆಂಡ್‌ನಲ್ಲಿ ಅವರ ಮೂರನೇ ಶತಕವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular