HomeLatest Newsಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5...

ಮದ್ಯ ಮಾರಾಟಗಾರರಿಗೆ ಗುಡ್ ನ್ಯೂಸ್: ಅಬಕಾರಿ ಲೈಸೆನ್ಸ್ ಶುಲ್ಕ ಶೇ. 50ರಷ್ಟು ಇಳಿಕೆ, ಅವಧಿ 5 ವರ್ಷಕ್ಕೆ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇಕಡ 50ರಷ್ಟು ಇಳಿಕೆ ಮಾಡಿದೆ. ಪ್ರತಿ ವರ್ಷ ಲೈಸೆನ್ಸ್ ನವೀಕರಣಕ್ಕೆ ವಿನಾಯಿತಿ ನೀಡಿ 5 ವರ್ಷಕ್ಕೊಮ್ಮೆ ಲೈಸೆನ್ಸ್ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಬಕಾರಿ ಸನ್ನದು ಶುಲ್ಕ ದುಪ್ಪಟ್ಟು ಮಾಡಿ ಕರಡು ಪ್ರಸ್ತಾವನೆ ಹೊರಡಿಸಿ ಆಕ್ಷೇಪಣೆ ಸಲ್ಲಿಸಲು 7 ದಿನ ಕಾಲಾವಕಾಶ ನೀಡಲಾಗಿತ್ತು. ಸನ್ನದು ಶುಲ್ಕ ಹೆಚ್ಚಳಕ್ಕೆ ಮದ್ಯ ಮಾರಾಟಗಾರರಿಂದ ಬಹಳಷ್ಟು ಆಕ್ಷೇಪಣೆ ಬಂದಿದ್ದು, ಆಕ್ಷೇಪಣೆ ಸ್ವೀಕರಿಸಿದ ಒಂದು ತಿಂಗಳ ನಂತರ ಶುಲ್ಕ ಇಳಿಕೆ ಮಾಡಲಾಗಿದೆ.

ಅಲ್ಲದೇ, ಇದುವರೆಗೆ ಪ್ರತಿ ವರ್ಷ ಅಬಕಾರಿ ಲೈಸೆನ್ಸ್ ನವೀಕರಣ ಮಾಡಿಸಿಕೊಳ್ಳಬೇಕಿತ್ತು. ಇದನ್ನು ಪ್ರತಿ 5 ವರ್ಷಕ್ಕೊಮ್ಮೆ ಲೈಸೆನ್ಸ್ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular