HomeLatest NewsBREAKING: ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಆರೋಪ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ...

BREAKING: ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಆರೋಪ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ FIR ದಾಖಲು

ಬೆಂಗಳೂರು: ಕಾರ್ ಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರ್ ನಲ್ಲಿದ್ದ ಮಹಿಳೆ ಸೇರಿದಂತೆ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಹಳೆನಿಜಗಲ್ ಸಮೀಪ ಘಟನೆ ನಡೆದಿದೆ. ಸೋಂಪುರ ಹೋಬಳಿಯ ಹಾಲೇನಹಳ್ಳಿ ಗ್ರಾಮದ ಸಲ್ಮಾನ್ ಖಾನ್(30), ಸೈಫ್ ಖಾನ್(28) ಇಲಿಯಾಸ್ ಖಾನ್(50), ಗುಲ್ ಷಿರಾ ಉನ್ನೀಸಾ(45) ಹಲ್ಲೆಗೊಳಗಾದವರು.

ಅನಂತ್ ಕುಮಾರ್ ಹೆಗಡೆ ಕಾರ್ ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ. ಸೋಮವಾರ ಸಂಜೆ ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಪುತ್ರ ಅಶುತೋಷ್ ಪ್ರಯಾಣಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಸ್ಲಿಂ ಕುಟುಂಬ ಇದ್ದ ಕಾರ್ ಓವರ್ ಟೇಕ್ ಮಾಡಿದೆ ಎಂದು ದಾಬಸ್ ಪೇಟೆ ಬಳಿ ರಸ್ತೆ ಪಕ್ಕದಲ್ಲಿ ಕಾರ್ ನಿಲ್ಲಿಸಿ ಕಾರ್ ನಲ್ಲಿ ಇದ್ದವರಿಗೆ ಶ್ರೀಧರ್, ಮಹೇಶ್ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಈ ವೇಳೆ ಗನ್ ತೋರಿಸಿ ಬೆದರಿಕೆ ಹಾಕಲಾಗಿದ್ದು, ದಾಬಸ್ ಪೇಟೆ ಠಾಣೆಗೆ ದೂರು ನೀಡಲಾಗಿದೆ. ಅನಂತ್ ಕುಮಾರ್ ಹೆಗಡೆ ಸೇರಿ ಅವರ ಗನ್ ಮ್ಯಾನ್, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular