HomeLatest NewsBIG NEWS: ಜೂ. 23ರಿಂದ ಗ್ರಾಪಂ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾಮಾನ್ಯ ವರ್ಗಾವಣೆ

BIG NEWS: ಜೂ. 23ರಿಂದ ಗ್ರಾಪಂ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾಮಾನ್ಯ ವರ್ಗಾವಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾಮಾನ್ಯ ಹಾಗೂ ಕೌನ್ಸೆಲಿಂಗ್ ವರ್ಗಾವಣೆ ಪ್ರಕ್ರಿಯೆ ಜೂನ್ 23ರಿಂದ ಜುಲೈ 28 ರ ವರೆಗೆ ನಡೆಸಲಾಗುವುದು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ -1 ಮತ್ತು 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಶೇಕಡ 9 ರಷ್ಟು ಕಡ್ಡಾಯ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಶೇಕಡ 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ಉದ್ದೇಶಿಸಲಾಗಿದೆ. ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಕಾರ್ಯದರ್ಶಿ ಗ್ರೇಡ್ -1 ಮತ್ತು 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗರಿಷ್ಠ 5 ವರ್ಷ ಸೇವೆ ಸಲ್ಲಿಸಿದ ಮತ್ತು ಖಾಲಿ ಹುದ್ದೆಗಳ ಜಿಲ್ಲಾವಾರು ಅಂತಿಮ ಪಟ್ಟಿಯನ್ನು ಜೂನ್ 30ರಂದು ಪ್ರಕಟಿಸಲಾಗುವುದು. ವರ್ಗಾವಣೆ ಮತ್ತು ವಿಸ್ತರಣೆಗೆ ಜುಲೈ 2ರ ಒಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular