HomeLatest Newsರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ವಿವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮಾ ಸೌಲಭ್ಯ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ವಿವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮಾ ಸೌಲಭ್ಯ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿಯ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಈ ಮೂಲಕ ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಂದ ಪೋಷಕರಿಗೆ ಎದುರಾಗುವ ಸಂಕಷ್ಟ ಕಡಿಮೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬೆಂಗಳೂರು ವಿವಿ ಎಲ್ಲಾ ವಿದ್ಯಾರ್ಥಿಗಳಿಗೆ ವಿಮೆ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.

 ವಿವಿಯ ಹಾಸ್ಟೆಲ್ ನಲ್ಲಿ ಇತ್ತೀಚೆಗೆ ಪಾವನ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಈ ಹಿಂದೆ 2022ರಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ವಿದ್ಯಾರ್ಥಿನಿ ಶಿಲ್ಪಾ ಸಾವಿನ ಪ್ರಕರಣಗಳ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಇಂತಹ ಅವಘಡಗಳು ಉಂಟಾದಾಗ ವಿದ್ಯಾರ್ಥಿಗಳಿಗೆ ತಕ್ಷಣ ನೆರವು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕಾಗಿ ಎಲ್ಲ ವಿದ್ಯಾರ್ಥಿಗಳಿಗೂ ಆರೋಗ್ಯ ವಿಮೆ ಮಾಡಿಸಲು ಸಿಂಡಿಕೇಟ್ ಸಭೆ ತೀರ್ಮಾನಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಾರ್ಷಿಕ ಶುಲ್ಕದ ಜೊತೆಗೆ ವಿಮಾ ಪ್ರೀಮಿಯಂ ಸೇರ್ಪಡೆ ಮಾಡಲಾಗುವುದು. ಪಿಎಂ ಜನ ಸುರಕ್ಷಾ ಯೋಜನೆಯ ವಿಮೆಗೆ ವಿದ್ಯಾರ್ಥಿಗಳ ಕಡ್ಡಾಯ ನೋಂದಣಿ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular